Ur Kannada News

ಜೈಲ್ ಜಾಮರ್ ಸಮಸ್ಯೆಗೆ ಅಸಲಿ ಹೊಣೆ ಯಾರು? ಸಚಿವ ಸಂಪುಟ ಮುತ್ತಿಗೆ ಹೇಳಿಕೆ ಹಿಂದಿದ್ಯಾ ರಾಜಕೀಯ?

ಮಂಗಳೂರು: ನಗರದ ಕೊಡಿಯಾಲ್‌ಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಜಾಮರ್‌ಗೆ ಸಂಬಂಧಿಸಿದಂತೆ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಜಗದೀಶ ಶೇಣವ ಹಾಗೂ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ನೈಜತೆಯನ್ನು ಮರೆಮಾಚಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಅಧ್ಯಕ್ಷ ಮನೋರಾಜ್ ರಾಜೀವ್ ಆರೋಪಿಸಿದ್ದಾರೆ.

ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೈಲ್ ಜಾಮರ್ ವಿಚಾರವಾಗಿ ಮಂಗಳೂರು ವಕೀಲರ ಸಂಘ ಮತ್ತು ಸ್ಥಳೀಯರೊಬ್ಬರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಜಾಮರ್ ನಿರ್ವಹಣೆ ಹೊಣೆ ಹೊತ್ತಿರುವ ಕೇಂದ್ರ ಸರ್ಕಾರದ ಅಧೀನದ ಟಿಸಿಐಎಲ್ ಸಂಸ್ಥೆಯು ‘ಜಾಮರ್ ಸಮಸ್ಯೆ ಸರಿಪಡಿಸಲಾಗಿದೆ’ ಎಂದು ಹೈಕೋರ್ಟ್‌ಗೆ ವರದಿ ನೀಡಿದೆ. ಒಂದು ವೇಳೆ ಸಮಸ್ಯೆ ಬಗೆಹರಿದಿರದಿದ್ದರೆ ಆಗಲೇ ಆಕ್ಷೇಪಣೆ ಸಲ್ಲಿಸಬಹುದಾಗಿತ್ತು ಎಂದು ಸ್ಪಷ್ಟಪಡಿಸಿದರು, ಅಲ್ಲದೆ, ಹೆಚ್ಚುವರಿ ಟವರ್‌ಗಳನ್ನು ಅಳವಡಿಸಲು ಅವಕಾಶವಿದ್ದು, ಸಂಸದ ಬ್ರಿಜೇಶ್ ಚೌಟ ಅವರ ಮೂಲಕ ಈ ಸಮಸ್ಯೆಯನ್ನು ಬಗೆಹರಿಸಬಹುದಿತ್ತು. ಆದರೆ, ವಕೀಲರ ಸಂಘದ ಅಧ್ಯಕ್ಷರಾಗಿ ಶೇಣವ ಅವರು ಹೈಕೋರ್ಟ್ ಪೀಠಕ್ಕೆ ಕ್ಯಾಬಿನೆಟ್‌ನಲ್ಲಿ ಅನುಮೋದನೆ, ನ್ಯಾಯಾಲಯಗಳ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಬಿಡುಗಡೆ ಹಾಗೂ ವಕೀಲರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸಿಎಂಗೆ ಮನವಿ ಮಾಡಬೇಕಿತ್ತು. ಅದನ್ನು ಬಿಟ್ಟು, ಜಾಮರ್ ನೆಪದಲ್ಲಿ ಜನರ ದಿಕ್ಕು ತಪ್ಪಿಸುವ ಹಾಗೂ ರಾಜಕೀಯ ಪ್ರೇರಿತವಾಗಿ ಸಚಿವ ಸಂಪುಟ ಸಭೆಯ ವೇಳೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಸದಸ್ಯರಾದ ನಂದಿನಿ, ಶಾಹೀದ್ ಬಡ್ಡೂರು, ಉಷಾ ಎಸ್., ಅರುಣಾ ಬಿ.ಪಿ., ಬಂಟ್ವಾಳ ಲೀಗಲ್ ಸೆಲ್ ಅಧ್ಯಕ್ಷರಾದ ಸುರೇಶ್ ಪೂಜಾರಿ,ಸುದರ್ಶನ್ ಮುಳಿಯ, ವಿನೋದರ ಪೂಜಾರಿ, ಬಂಟ್ವಾಳ ವಕೀಲರಾದ ಮೋಹನ್ ಕಡೇಶ್ವಾಲ್ಯ ಹಾಗೂ ಮಂಜುನಾಥ್ ಪೂಜಾರಿ ಉಪಸ್ಥಿತರಿದ್ದರು.

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.

Leave a Reply

Your email address will not be published. Required fields are marked *