Ur Kannada News

ಮಾಜಿ ಸಚಿವ ರಮಾನಾಥ್ ರೈ ಕಾರಿಗೆ ಖಾಸಗಿ ಬಸ್ ಡಿಕ್ಕಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಕಾರ್ಕಳ: ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ. ರಮಾನಾಥ್ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಸಾಣೂರು ಜಂಕ್ಷನ್ ಬಳಿ ಸೆಪ್ಟೆಂಬರ್ 20ರ ಮಧ್ಯಾಹ್ನ ಭೀಕರ ಮುಖಾಮುಖಿ ರಸ್ತೆ ಅಪಘಾತ ಸಂಭವಿಸಿದೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ರಮಾನಾಥ್ ರೈ ಅವರು ಕಾರ್ಕಳಕ್ಕೆ ಆಗಮಿಸುತ್ತಿದ್ದ ವೇಳೆ, ಕಾರ್ಕಳದಿಂದ ಮೂಡುಬಿದಿರೆ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ‘ವಿಶಾಲ್’ ಹೆಸರಿನ ಖಾಸಗಿ ಬಸ್ ಡಿಕ್ಕಿಯಾಗಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಕಾರಿನಲ್ಲಿದ್ದ ಮಾಜಿ ಸಚಿವ ರಮಾನಾಥ್ ರೈ ಸೇರಿದಂತೆ ನಾಲ್ವರು ಪ್ರಯಾಣಿಕರು ಹಾಗೂ ಬಸ್‌ನಲ್ಲಿದ್ದ 6 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಕಾರ್ಕಳದ ರೋಟರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ವಿಷಯ ತಿಳಿಯುತ್ತಿದ್ದಂತೆಯೇ ಮಿಥುನ್ ರೈ,ಗಫೂರ್, ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ, ಕಾಂಗ್ರೆಸ್ ಮುಖಂಡರಾದ ಉದಯ ಕುಮಾರ್ ಶೆಟ್ಟಿ ಮುನಿಯಾಲು, ಸುಧಾಕರ್ ಶೆಟ್ಟಿ, ಬಂಟ್ವಾಳ ಲೀಗಲ್ ಸೆಲ್‌ನ ವಕೀಲರಾದ ಸುರೇಶ್ ಪೂಜಾರಿ ಸೇರಿದಂತೆ ಹಲವಾರು ಗಣ್ಯರು ಹಾಗೂ ಪಕ್ಷದ ಪ್ರಮುಖ ಮುಖಂಡರು ಆಸ್ಪತ್ರೆಗೆ ಧಾವಿಸಿ, ರಮಾನಾಥ್ ರೈ ಅವರ ಆರೋಗ್ಯ ವಿಚಾರಿಸಿದ್ದಾರೆ.

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.

Leave a Reply

Your email address will not be published. Required fields are marked *