Ur Kannada News

ಸೌಜನ್ಯ ಕೊಲೆ ಕೇಸ್‌ಗೆ ಮರುಜೀವ:ಸುಪ್ರೀಂಕೋರ್ಟ್ ಸೂಚನೆಯಂತೆ ಸೌಜನ್ಯ ಪ್ರಕರಣ ಮರುತನಿಖೆಗೆ ಸರ್ಕಾರದಿಂದ ಎಸ್‌ಐಟಿ ರಚನೆ,ಖಡಕ್ ಅಧಿಕಾರಿಗಳ ಕಣ್ಗಾವಲಿನಲ್ಲಿ ಸೌಜನ್ಯ ಕೊಲೆ ಕೇಸ್

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದ್ದ ಬಹುಚರ್ಚಿತ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಸಮಗ್ರ ಮರುತನಿಖೆಗಾಗಿ ಕರ್ನಾಟಕ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶ ಸಂಖ್ಯೆ: ಹೆಚ್‌ಡಿ 228 ಸಿಬಡಿ 2026 (ಬೆಂಗಳೂರು, ದಿನಾಂಕ: 24/09/2026) ರ ಅನ್ವಯ ಈ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯ ಮೊ.ಸಂ. 250/2012 (ಕಲಂ 376, 302 ಐ.ಪಿ.ಸಿ) ಹಾಗೂ ಸಿಬಿಐ ಚೆನ್ನೈ ವಿಭಾಗವು ಮರು ನೋಂದಾಯಿಸಿದ್ದ FIR ಸಂಖ್ಯೆ: RC 2(S)/2014/CBI/SCB/CHENNAI (ದಿನಾಂಕ: 07.03.2014) ರ ಪ್ರಕರಣವನ್ನು ಸಂಪೂರ್ಣವಾಗಿ ಮರುತನಿಖೆ ನಡೆಸಲು ಈ ಪಡೆಗೆ ವಹಿಸಲಾಗಿದೆ.  

ಹೊಸದಾಗಿ ರಚನೆಯಾಗಿರುವ ಈ ವಿಶೇಷ ತನಿಖಾ ತಂಡದ ಮುಖ್ಯಸ್ಥರನ್ನಾಗಿ ಹಿರಿಯ ಪೊಲೀಸ್ ಅಧಿಕಾರಿ, ಐಜಿಪಿ ಶ್ರೀ ಎನ್. ಶಶಿಕುಮಾರ್, ಐ.ಪಿ.ಎಸ್ ಅವರನ್ನು ನೇಮಕ ಮಾಡಲಾಗಿದೆ. ಈ ತಂಡದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಸಿ.ಹೆಚ್. ಸುಧೀರ್ ಕುಮಾರ್ ರೆಡ್ಡಿ, ಐ.ಪಿ.ಎಸ್, ಬೆಂಗಳೂರು ರಾಜ್ಯ ಗುಪ್ತವಾರ್ತೆಯ ಎಸ್‌ಪಿ ಶ್ರೀಮತಿ ನಿಶಾ ಜೇಮ್ಸ್, ಐ.ಪಿ.ಎಸ್, ಬೆಂಗಳೂರು ಸಿಐಡಿ ಎಸ್‌ಪಿ ಶ್ರೀ ಲೋಕೇಶ್ ಜಗಲಸಾರ್, ಐ.ಪಿ.ಎಸ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಎಸ್‌ಪಿ ಶ್ರೀ ವೆಂಕಟೇಶ್ ಪ್ರಸನ್ನ ಅವರು ಪ್ರಮುಖ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ವಿಶೇಷ ತನಿಖಾ ತಂಡಕ್ಕೆ ಕರ್ನಾಟಕ ರಾಜ್ಯ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 2(1)(ಯು) ಅಡಿಯಲ್ಲಿ ತನಿಖೆ ನಡೆಸಲು ಸಂಪೂರ್ಣ ಅಧಿಕಾರ ನೀಡಲಾಗಿದೆ.

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.

Leave a Reply

Your email address will not be published. Required fields are marked *