Latest:
Ur Kannada News

ವಕೀಲರಿಗೆ ಸಿಗಬೇಕಿದೆ ತುರ್ತು ರಕ್ಷಣೆ: ಬೆಂಗಳೂರು ವಕೀಲರ ಸಂಘದ ಸರ್ವ ಸದಸ್ಯರ ಸಭೆಗೆ ರಾಕೇಶ್ ಎಸ್. ಎನ್. ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ವಕೀಲರ ಮೇಲೆ ನಡೆಯುತ್ತಿರುವ ಕೊಲೆ ಯತ್ನ, ಮಾರಣಾಂತಿಕ ಹಲ್ಲೆ, ಬೆದರಿಕೆ ಹಾಗೂ ದೌರ್ಜನ್ಯ ಪ್ರಕರಣಗಳನ್ನು ತೀವ್ರವಾಗಿ ಖಂಡಿಸಿರುವ ಬೆಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ರಾಕೇಶ್ ಎಸ್. ಎನ್. ಅವರು, ವಕೀಲರ ಸುರಕ್ಷತೆ ಮತ್ತು ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಸಂಘದ ತುರ್ತು ಸರ್ವ ಸದಸ್ಯರ ಸಭೆ ಕರೆಯುವಂತೆ ಕೋರಿ ಸಂಘದ ಮಾನ್ಯ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ಅಧಿಕೃತ ಮನವಿ ಸಲ್ಲಿಸಿದ್ದಾರೆ.

ನ್ಯಾಯಕ್ಕಾಗಿ ನ್ಯಾಯಾಲಯಗಳಲ್ಲಿ ಶ್ರಮಿಸುವ ವಕೀಲರೇ ಇಂದು ತಮ್ಮ ಜೀವ ಮತ್ತು ವೈಯಕ್ತಿಕ ಸುರಕ್ಷತೆಯ ಬಗ್ಗೆ ಆತಂಕ ಪಡುವಂತಹ ಗಂಭೀರ ವಾತಾವರಣ ನಿರ್ಮಾಣವಾಗಿದ್ದು, ವಕೀಲರ ಜೀವ, ವೈಯಕ್ತಿಕ ರಕ್ಷಣೆ ಮತ್ತು ವೃತ್ತಿಪರ ಸ್ವಾತಂತ್ರ್ಯವನ್ನು ಕಾಪಾಡುವುದು ಸಂಘದ ಆದ್ಯ ಕರ್ತವ್ಯವಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ವಕೀಲರ ಮೇಲಿನ ದೌರ್ಜನ್ಯ ತಡೆಯಲು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಯನ್ನು ಒತ್ತಾಯಿಸಬೇಕು ಮತ್ತು ವಕೀಲರಿಗೆ ಸೂಕ್ತ ರಕ್ಷಣಾ ವ್ಯವಸ್ಥೆ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಗೃಹ ಸಚಿವರು ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಬೆಂಗಳೂರು ವಕೀಲರ ಸಂಘದ ವತಿಯಿಂದ ತುರ್ತಾಗಿ ಅಧಿಕೃತ ಮನವಿ ಸಲ್ಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ವಕೀಲರು ಯಾವುದೇ ಭಯ, ಒತ್ತಡವಿಲ್ಲದೆ ಮುಕ್ತವಾಗಿ ವೃತ್ತಿ ನಿರ್ವಹಿಸಲು ಸುರಕ್ಷಿತ ವಾತಾವರಣ ಅಗತ್ಯವಿರುವ ಹಿನ್ನೆಲೆಯಲ್ಲಿ, ಕೂಡಲೇ ಸರ್ವ ಸದಸ್ಯರ ಸಭೆಯನ್ನು ಕರೆದು ಎಲ್ಲಾ ವಕೀಲರ ಅಭಿಪ್ರಾಯ ಪಡೆದು ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕಾನೂನಾತ್ಮಕ ಕ್ರಮಗಳು ಹಾಗೂ ಅಗತ್ಯವಿದ್ದಲ್ಲಿ ಶಾಂತಿಯುತ, ಪ್ರಜಾಸತ್ತಾತ್ಮಕ ಹೋರಾಟದ ರೂಪುರೇಷೆಗಳನ್ನು ನಿರ್ಧರಿಸಬೇಕೆಂದು ಶ್ರೀ ರಾಕೇಶ್ ಎಸ್. ಎನ್. ಅವರು ಪತ್ರದಲ್ಲಿ ವಿನಂತಿಸಿದ್ದಾರೆ.

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.

Leave a Reply

Your email address will not be published. Required fields are marked *