Latest:
Ur Kannada News

ಶೇಕಡಾ 38%ರಷ್ಟು ಕ್ರಿಮಿನಲ್ ಕೇಸುಗಳು ಚೆಕ್ ಅಮಾನ್ಯಕ್ಕೆ ಸಂಬಂಧಿಸಿದ್ದು , ಗಂಭೀರ ವಿಚಾರಣೆಗಳಿಗೆ ಅಡ್ಡಿಯಾಗುತ್ತಿದೆ ಎಂದ ಹೈಕೋರ್ಟ್ ಜಡ್ಜ್

ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಚೆಕ್_ಗಳ ದುರ್ಬಳಕೆ ಮತ್ತು ಚೆಕ್ ಅಮಾನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು , ಇದು ನ್ಯಾಯಾಲಯಗಳಲ್ಲಿ ಕೊಲೆ ಸೇರಿದಂತೆ ಇತರ ಗಂಭೀರ ಸ್ವರೂಪದ ಪ್ರಕರಣಗಳ ವಿಚಾರಣೆ ಹಾಗೂ ವಿಲೇವಾರಿಗೆ ದೊಡ್ಡ ಅಡ್ಡಿಯನ್ನು ಉಂಟು ಮಾಡುತ್ತಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಶ್ರೀಶಾನಂದ ಪೀಠ ಆತಂಕ ವ್ಯಕ್ತಪಡಿಸಿದೆ.

ಚೆಕ್ ಅಮಾನ್ಯ ಪ್ರಕರಣವೊಂದರ ವಿಚಾರಣೆ ವೇಳೆ ಈ ವಿಚಾರವಾಗಿ ಕಳವಳ ವ್ಯಕ್ತಪಡಿಸಿದ ನ್ಯಾಯಮೂರ್ತಿ ಶ್ರೀಶಾನಂದ ಅವರು ನ್ಯಾಯಾಲಯದ ಮೇಲಿನ ಹೆಚ್ಚಿನ ಹೊರೆಯನ್ನು ಅಂಕಿಅಂಶಗಳ ಸಮೇತ ಉಲ್ಲೇಖಿಸಿದರು.

ಪ್ರಸ್ತುತ ನ್ಯಾಯಾಲಯಗಳಲ್ಲಿ ಸಲ್ಲಿಕೆಯಾಗುತ್ತಿರುವ ಒಟ್ಟು ಕ್ರಿಮಿನಲ್ ಪ್ರಕರಣಗಳ ಪೈಕಿ ಸುಮಾರು ಶೇಕಡಾ 38% ಪ್ರಕರಣಗಳು ಚೆಕ್ ಅಮಾನ್ಯ ಪ್ರಕರಣಗಳಿಗೆ ಸಂಬಂಧಿಸಿದ್ದಾಗಿದೆ ಎಂದು ಅಧಿಕೃತ ಮಾಹಿತಿ ನೀಡಿದ ಅವರು, ಚೆಕ್ ದುರ್ಬಳಕೆ ತಡೆಗಟ್ಟುವ ಅಗತ್ಯತೆಯನ್ನು ಒತ್ತಿ ಹೇಳಿದರು.

ಚೆಕ್ ಬೌನ್ಸ್ ಪ್ರಕರಣಗಳು ಹೆಚ್ಚಾದಂತೆ ನ್ಯಾಯಾಲಯದ ಸಮಯ ಹೆಚ್ಚಿನ ಪ್ರಮಾಣದಲ್ಲಿ ಈ ಪ್ರಕರಣಗಳ ವಿಚಾರಣೆಗೆ ವಿನಿಯೋಗವಾಗುತ್ತಿದೆ, ಇದರಿಂದಾಗಿ ತೀವ್ರ ಸ್ವರೂಪದ ಅಪರಾದ ವಿಚಾರಣೆ ವಿಳಂಬವಾಗುತಿದ್ದು , ಇದು ನ್ಯಾಯಾಲಯಗಳಲ್ಲಿ ಕೊಲೆ ಸೇರಿದಂತೆ ಇತರ ಗಂಭೀರ ಸ್ವರೂಪದ ಪ್ರಕರಣಗಳ ವಿಚಾರಣೆ ಹಾಗೂ ವಿಲೇವಾರಿಗೆ ದೊಡ್ಡ ಅಡ್ಡಿಯನ್ನು ಉಂಟು ಮಾಡುತ್ತಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಶ್ರೀಶಾನಂದ ಪೀಠ ಆತಂಕ ವ್ಯಕ್ತಪಡಿಸಿದರು.

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.

Leave a Reply

Your email address will not be published. Required fields are marked *