Ur Kannada News

ಶಾಲೆ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟಕ್ಕೆ ಬ್ರೇಕ್: ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ

ಈ ಮಹತ್ವದ ನಿರ್ಧಾರಕ್ಕೆ ಕಾರಣವೇನು?

ಸಣ್ಣ ವಯಸ್ಸಿನಲ್ಲೇ ಮಕ್ಕಳಲ್ಲಿ ಬೊಜ್ಜು ,ಮಧುಮೇಹ ಹಾಗೂ ರಕ್ತದೊತ್ತಡದಂತಹ ಗಂಭೀರ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಮೈದಾ, ತಂಪು ಪಾನೀಯಗಳು,ಸಂಸ್ಕರಿಸಿದ ತಿಂಡಿಗಳು ಮತ್ತು ಕರಿದ ಪದಾರ್ಥಗಳು ಮಕ್ಕಳಲ್ಲಿ ತಕ್ಷಣಕ್ಕೆ ಸಕ್ಕರೆ ಮಟ್ಟವನ್ನು ಹೆಚ್ಚಿಸಿ ದೀರ್ಘಕಾಲೀನ ಆರೋಗ್ಯ ತೊಂದರೆಗಳನ್ನು ಉಂಟುಮಾಡುತ್ತವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಪೌಷ್ಟಿಕ ಆಹಾರ ಅಭ್ಯಾಸ ಬೆಳೆಸಲು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.

ಕರ್ನಾಟಕ ರಾಜ್ಯ ಸರ್ಕಾರ ಮತ್ತು ಆಹಾರ ಸುರಕ್ಷತಾ ಇಲಾಖೆ ಒಂದು ಅತ್ಯಂತ ಮಹತ್ವದ ಹಾಗೂ ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿದೆ. ರಾಜ್ಯದ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ಆವರಣಗಳಲ್ಲಿ ಹಾಗೂ ಶಾಲೆಗಳಿಂದ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಸರ್ಕಾರದ ಮುಖ್ಯ ನಿರ್ದೇಶನಗಳು ಮತ್ತು ನಿಯಮಗಳು:

 50 ಮೀಟರ್ ವ್ಯಾಪ್ತಿಯಲ್ಲಿ ನಿಷೇಧ: ಶಾಲಾ-ಕಾಲೇಜು ಕ್ಯಾಂಪಸ್‌ಗಳು, ಕ್ಯಾಂಟೀನ್‌ಗಳು ಹಾಗೂ ಶಿಕ್ಷಣ ಸಂಸ್ಥೆಗಳ ಸುತ್ತಲಿನ 50 ಮೀಟರ್ ಪ್ರದೇಶದಲ್ಲಿ ಅತಿಯಾದ ಕೊಬ್ಬು, ಸಕ್ಕರೆ ಮತ್ತು ಉಪ್ಪಿನಂಶವಿರುವ ಜಂಕ್ ಫುಡ್‌ಗಳನ್ನು ಮಾರಾಟ ಮಾಡುವಂತಿಲ್ಲ.

ಈ ಮಹತ್ವದ ನಿರ್ಧಾರಕ್ಕೆ ಕಾರಣವೇನು?

ಸಣ್ಣ ವಯಸ್ಸಿನಲ್ಲೇ ಮಕ್ಕಳಲ್ಲಿ ಬೊಜ್ಜು,ಮಧುಮೇಹ ಹಾಗೂ ರಕ್ತದೊತ್ತಡದಂತಹ ಗಂಭೀರ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಮೈದಾ, ತಂಪು ಪಾನೀಯಗಳು, ಸಂಸ್ಕರಿಸಿದ ತಿಂಡಿಗಳು ಮತ್ತು ಕರಿದ ಪದಾರ್ಥಗಳು ಮಕ್ಕಳಲ್ಲಿ ತಕ್ಷಣಕ್ಕೆ ಸಕ್ಕರೆ ಮಟ್ಟವನ್ನು ಹೆಚ್ಚಿಸಿ ದೀರ್ಘಕಾಲೀನ ಆರೋಗ್ಯ ತೊಂದರೆಗಳನ್ನು ಉಂಟುಮಾಡುತ್ತವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಪೌಷ್ಟಿಕ ಆಹಾರ ಅಭ್ಯಾಸ ಬೆಳೆಸಲು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.