Ur Kannada News

SDPI ಮುಡಿಪು ಬ್ಲಾಕ್ ನೂತನ ಅಧ್ಯಕ್ಷರಾಗಿ ಹನೀಫ್ ರಂತಡ್ಕ

ಮುಡಿಪು: ಸೋಶಿಯಲ್ ಡೆಮೋಕ್ರೇಟಿಕ್ ಪಾರ್ಟಿ ಆಫ್ ಇಂಡಿಯಾ ಉಳ್ಳಾಲವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಡಿಪು ಬ್ಲಾಕ್ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಜುಲೈ 31, 2026ರಂದು ಹರೇಕಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಜಿಲ್ಲಾ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಹಾಗೂ ಜಿಲ್ಲಾ ಸಮಿತಿ ಸದಸ್ಯ ಅಕ್ಬರ್ ರಾಝ ಅವರ ಸಮ್ಮುಖದಲ್ಲಿ ಆಂತರಿಕ ಚುನಾವಣಾ ಪ್ರಕ್ರಿಯೆ ನೆರವೇರಿದ್ದು, ನೂತನ ಮುಡಿಪು ಬ್ಲಾಕ್ ಸಮಿತಿಯ ಅಧ್ಯಕ್ಷರಾಗಿ ಹನೀಫ್ ರಂತಡ್ಕ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ನಾಯಕರು, ನೂತನವಾಗಿ ರಚನೆಯಾದ ಮುಡಿಪು ಬ್ಲಾಕ್ ಸಮಿತಿಯು ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ, ಜನಪರ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕೆಂದು ಆಶಯ ವ್ಯಕ್ತಪಡಿಸಿದರು. ಇದೇ ವೇಳೆ ನೂತನ ಅಧ್ಯಕ್ಷ ಹನೀಫ್ ರಂತಡ್ಕ ಅವರ ಕಾರ್ಯವೈಖರಿಯನ್ನು ಶ್ಲಾಘಿಸಲಾಯಿತು. ರಂತಡ್ಕ ವಾರ್ಡ್‌ನ ಗ್ರಾಮ ಪಂಚಾಯತ್ ಸದಸ್ಯರಾಗಿ ಅಪಾರ ಸಾಮಾಜಿಕ ಸೇವೆ ಸಲ್ಲಿಸಿರುವ ಇವರು, ತಮ್ಮ ಜನಪರ ಕೆಲಸಗಳಿಂದ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹನೀಫ್ ಅವರ ನೇತೃತ್ವದಲ್ಲಿ ಬ್ಲಾಕ್ ಸಮಿತಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Haneef Rantadka

ಈ ಮಹತ್ವದ ಸಭೆಯಲ್ಲಿ SDPI ಕ್ಷೇತ್ರ ಉಪಾಧ್ಯಕ್ಷ ಬಶೀರ್ ಎಸ್.ಎಂ., ಕ್ಷೇತ್ರ ಕಾರ್ಯದರ್ಶಿಗಳಾದ ಉಬೈದ್ ಅಮ್ಮೆಂಬಳ, ಅಶ್ರಫ್ ಮಂಚಿ, ಆರೀಫ್ ಬೋಳಿಯಾರ್, ಸಲೀಂ ಕುಂಪನಮಜಲ್ ಸೇರಿದಂತೆ ಕ್ಷೇತ್ರ ಸಮಿತಿಯ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.