Ur Kannada News

ನಾಗರ ಪಂಚಮಿ ಹಿನ್ನೆಲೆ: ಆಗಸ್ಟ್ 17 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಣೆ

ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17, 2026ರ ಸೋಮವಾರದಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಈ ಕುರಿತು ಅಧಿಕೃತ ಸು ತ್ತೋಲೆಯನ್ನು ಬಿಡುಗಡೆ ಮಾಡಿದ್ದು, ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮನವಿಯ ಮೇರೆಗೆ ಈ ಸ್ಥಳೀಯ ರಜೆಯನ್ನು ಮಂಜೂರು ಮಾಡಿದೆ. ಸರ್ಕಾರದ ಆದೇಶದಂತೆ, ಆಗಸ್ಟ್ 17ರ ಸೋಮವಾರದಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಅನುದಾನಿತ ಹಾಗೂ ಅನುದಾನರಹಿತ ಶಾಲಾ-ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ಸ್ಪಷ್ಟಪಡಿಸಿದೆ.

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.

Leave a Reply

Your email address will not be published. Required fields are marked *