Ur Kannada News

ಸಿವಿಲ್ ಜಡ್ಜ್ ಆಕಾಂಕ್ಷಿಗಳಿಗೆ ನಾಳೆ ಬಿಗ್ ಡೇ: 3 ವರ್ಷಗಳ ಅನುಭವದ ನಿಯಮದ ವಿರುದ್ಧ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಗಳ ತೀರ್ಪು ಪ್ರಕಟ

ಹೊಸದೆಹಲಿ:ಸಿವಿಲ್ ಜಡ್ಜ್ ಸೇರಿದಂತೆ ನ್ಯಾಯಾಂಗ ಸೇವಾ ಪರೀಕ್ಷೆಗಳಿಗೆ ಹಾಜರಾಗಲು ಕನಿಷ್ಠ 3 ವರ್ಷಗಳ ಕಾಲ ವಕೀಲರಾಗಿ ಸೇವೆ ಸಲ್ಲಿಸಿರಬೇಕು ಎಂಬ ನಿಯಮವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ನಾಳೆ ತನ್ನ ಪ್ರಮುಖ ತೀರ್ಪನ್ನು ಪ್ರಕಟಿಸಲಿದೆ.

ನ್ಯಾಯಾಂಗ ಪರೀಕ್ಷೆಗಳಿಗೆ ಕುಳಿತುಕೊಳ್ಳಲು ಕನಿಷ್ಠ 3 ವರ್ಷಗಳ ಕಾಲ ವಕೀಲಿಕೆ ಅನುಭವ ಕಡ್ಡಾಯಗೊಳಿಸಿದ ನಿಯಮವು ಹೊಸದಾಗಿ ಕಾನೂನು ಪದವಿ ಮುಗಿಸಿದ ಅಭ್ಯರ್ಥಿಗಳಿಗೆ ಕಷ್ಟಕರವಾಗಿದೆ ಎಂಬ ಆಕ್ಷೇಪಗಳು ವ್ಯಕ್ತವಾಗಿದ್ದವು. ಈ ನಿಯಮವನ್ನು ಮರುಪರಿಶೀಲಿಸುವಂತೆ ಕೋರಿ ಕಾನೂನು ವಿದ್ಯಾರ್ಥಿಗಳು ಹಾಗೂ ವಕೀಲರ ಸಂಘಟನೆಗಳು ಉನ್ನತ ನ್ಯಾಯಾಲಯದ ಬಾಗಿಲು ತಟ್ಟಿದ್ದವು.

ನಾಳೆ ಬರಲಿರುವ ಸುಪ್ರೀಂ ಕೋರ್ಟ್‌ನ ಈ ತೀರ್ಪು, ದೇಶಾದ್ಯಂತ ಲಕ್ಷಾಂತರ ಕಾನೂನು ಪದವೀಧರರು ಮತ್ತು ನ್ಯಾಯಾಂಗ ಸೇವಾ ಆಕಾಂಕ್ಷಿಗಳ ಭವಿಷ್ಯದ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿದೆ.

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.

Leave a Reply

Your email address will not be published. Required fields are marked *