ಮಂಗಳೂರಿನಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ: ‘ಆಪರೇಷನ್ ರೈಸ್’ ಹಾಗೂ ‘ಬೇಡ BRO’ ಅಭಿಯಾನಕ್ಕೆ ಚಾಲನೆ
ಕರ್ನಾಟಕ ಸರ್ಕಾರ, ಮಂಗಳೂರು ನಗರ ಪೊಲೀಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಜಂಟಿ ಆಶ್ರಯದಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ವಿರುದ್ಧ ರಾಜ್ಯವ್ಯಾಪಿ ಜಾಗೃತಿ ಮೂಡಿಸುವ ಉದ್ದೇಶದಿಂದ “OPERATION RISE & ಬೇಡ BRO” ಎಂಬ ವಿಶೇಷ ಉಪಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜುಲೈ 30, 2026 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ನಲ್ಲಿ ಈ ಕಾರ್ಯಕ್ರಮ ನೆರವೇರಲಿದೆ.
ಪ್ರಮುಖ ಗಣ್ಯರ ಉಪಸ್ಥಿತಿ:
ಉದ್ಘಾಟನೆ: ಸನ್ಮಾನ್ಯ ಆರೋಗ್ಯ & ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಯು. ಟಿ. ಖಾದರ್ ಫರೀದ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಅಧ್ಯಕ್ಷತೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.
ಘನ ಉಪಸ್ಥಿತಿ: ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಸುಧೀರ್ ಕುಮಾರ್ ರೆಡ್ಡಿ ಸಿ.ಎಚ್, ಐ.ಪಿ.ಎಸ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀ ದರ್ಶನ್ ಹೆಚ್.ವಿ, ಐ.ಎ.ಎಸ್ ಹಾಗೂ ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ಕೆ, ಐ.ಪಿ.ಎಸ್ ಉಪಸ್ಥಿತರಿರಲಿದ್ದಾರೆ.


ಇದರೊಂದಿಗೆ ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಯುವಜನತೆಯನ್ನು ಮಾದಕ ದ್ರವ್ಯಗಳ ಜಾಲದಿಂದ ದೂರವಿಡಲು ಈ ಜಾಗೃತಿ ಅಭಿಯಾನವನ್ನು ರೂಪಿಸಲಾಗಿದೆ.
