Latest:
Ur Kannada News

SDTU ಮೈಸೂರು ವಿಭಾಗೀಯ ವಿಶೇಷ ಸಭೆ: ರಾಜ್ಯಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ನೇತೃತ್ವದಲ್ಲಿ ಪ್ರಮುಖ ನಿರ್ಧಾರಗಳು

ಮೈಸೂರು: ಸೆ27; SDTU ಮೈಸೂರು ವಿಭಾಗೀಯ ಜಿಲ್ಲೆಗಳ ವಿಶೇಷ ಸಭೆಯು ರಾಜ್ಯಾಧ್ಯಕ್ಷರಾದ ಅಥಾವುಲ್ಲಾ ಜೋಕಟ್ಟೆ ಅವರ ನೇತೃತ್ವದಲ್ಲಿ ಮೈಸೂರಿನಲ್ಲಿ ನಡೆಯಿತು.

ಸಭೆಯ ಆರಂಭದಲ್ಲಿ ರಾಜ್ಯಾಧ್ಯಕ್ಷರಾದ ಅಥಾವುಲ್ಲಾ ಜೋಕಟ್ಟೆ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಸಂಘಟನೆಯ ಮುಂದಿನ ಕಾರ್ಯಚಟುವಟಿಕೆಗಳು ಹಾಗೂ ಕಾರ್ಮಿಕರ ಹಕ್ಕುಗಳಿಗಾಗಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯತೆಯ ಕುರಿತು ಮಾತನಾಡಿದರು.

ಸಭೆಯಲ್ಲಿ ಪ್ರಮುಖವಾಗಿ ಸದಸ್ಯತ್ವ ಅಭಿಯಾನ, ವಿವಿಧ ಸೆಕ್ಟರ್‌ಗಳ ರಚನೆ ಹಾಗೂ ಕಾರ್ಮಿಕರಿಗಾಗಿ ವೆಲ್ಫೇರ್ ಸ್ಕೀಮ್ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯಿತು.

ಇದೇ ಸಂದರ್ಭದಲ್ಲಿ ಮಾಧ್ಯಮದಲ್ಲಿ ಸಕ್ರಿಯ ಭಾಗವಹಿಸುವಿಕೆ ಹಾಗೂ ಮಾಧ್ಯಮದ ಪರಿಣಾಮಕಾರಿ ಬಳಕೆ ಕುರಿತು SDTU ರಾಜ್ಯ ಸಮಿತಿ ಸದಸ್ಯರಾದ ರಹಿಮಾನ್ ಬೋಳಿಯಾರ್ ಅವರು ತರಗತಿ ನಡೆಸಿದರು.

ಸಭೆಯಲ್ಲಿ ಎಸ್ಡಿಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಸಲೀಂ ಜಿ.ಕೆ, ಸಮಿತಿ ಸದಸ್ಯರುಗಳಾದ ಅಬೂಬಕ್ಕರ್ ಮದ್ದ,ಹನೀಫ್ ಮುಳೂರು,ಅಮೀನ್ ಶೇಠ್ ಹಾಗೂ ಮೈಸೂರು ವಿಭಾಗಿಯ ಜಿಲ್ಲೆಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಭಾಗವಹಿಸಿದ್ದರು.

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.

Leave a Reply

Your email address will not be published. Required fields are marked *