Ur Kannada News

ಸೆಪ್ಟೆಂಬರ್ 12ರ ಬದಲು ಸೆಪ್ಟೆಂಬರ್ 19ಕ್ಕೆ 3ನೇ ರಾಷ್ಟ್ರೀಯ ಲೋಕ್ ಅದಾಲತ್ ಮರುನಿಗದಿ

ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ರಾಜ್ಯಾದ್ಯಂತ ಆಯೋಜಿಸಲು ಉದ್ದೇಶಿಸಿದ್ದ 3ನೇ ರಾಷ್ಟ್ರೀಯ ಲೋಕ್ ಅದಾಲತ್ ದಿನಾಂಕವನ್ನು ಮುಂಡೂಡಿದ್ದು, ನೂತನ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಿದೆ.
ಕರ್ನಾಟಕ ಹೈಕೋರ್ಟ್‌ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳು ಹಾಗೂ KSLSA ಮುಖ್ಯ ಪೋಷಕರ ಸಮ್ಮತಿಯೊಂದಿಗೆ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಹಿಂದೆ ಸೆಪ್ಟೆಂಬರ್ 12, 2026 ರಂದು ನಡೆಯಬೇಕಿದ್ದ 3ನೇ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಸೆಪ್ಟೆಂಬರ್ 19, 2026 ರಂದು ನಡೆಸಲು ದಿನಾಂಕವನ್ನು ಮರುನಿಗದಿಪಡಿಸಲಾಗಿದೆ.
ಈ ಕುರಿತು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಅಧಿಕೃತ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು, ತಾಲೂಕು ಕಾನೂನು ಸೇವಾ ಸಮಿತಿಗಳು ಹಾಗೂ ಹೈಕೋರ್ಟ್ ಕಾನೂನು ಸೇವಾ ಸಮಿತಿಗಳಿಗೆ ಹೊಸ ದಿನಾಂಕದಂತೆ ಅಗತ್ಯ ಪೂರ್ವಭಾವಿ ಸಿದ್ಧತೆಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದಾರೆ.

ಸಾರ್ವಜನಿಕರು ಹಾಗೂ ಕಕ್ಷಿದಾರರು ರಾಜಿಸಂಧಾನದ ಮೂಲಕ ತಮ್ಮ ನ್ಯಾಯಾಲಯದ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಲು ಈ ಅವಕಾಶವನ್ನು ಬಳಸಿಕೊಳ್ಳಬಹುದು.

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.

Leave a Reply

Your email address will not be published. Required fields are marked *