Ur Kannada News

ಆರೋಗ್ಯ ಇಲಾಖೆಯಲ್ಲಿ ಉದ್ಯೋಗಪರ್ವ: 7 ಸಾವಿರ ಸಿಬ್ಬಂದಿ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್, ಸಚಿವ ಯು.ಟಿ. ಖಾದರ್ ಅವರ ಕನಸಿನ ಯೋಜನೆಗೆ ಸಚಿವ ಸಂಪುಟ ಅಸ್ತು

ರಾಜ್ಯದಲ್ಲಿ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಬೃಹತ್ ಹೆಜ್ಜೆ ಇಟ್ಟಿದೆ. ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಬರೋಬ್ಬರಿ 7,000 ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಹಸಿರು ನಿಶಾನೆ ತೋರಿಸಿದೆ.

ಆರೋಗ್ಯ ಸಚಿವರಾಗಿ ಈಗಾಗಲೇ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದು ರಾಜ್ಯಾದ್ಯಂತ ಅಪಾರ ಜನಮನ್ನಣೆ ಗಳಿಸಿರುವ ಯು.ಟಿ. ಖಾದರ್ ಅವರ ಸಾಧನೆಯ ಪಟ್ಟಿಗೆ ಈ ಬೃಹತ್ ನೇಮಕಾತಿ ನಿರ್ಧಾರವು ಮತ್ತೊಂದು ಹೆಮ್ಮೆಯ ಸೇರ್ಪಡೆಯಾಗಲಿದೆ. ಅವರ ಜನಪರ ಕಾಳಜಿ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸರ್ಕಾರದ ಹಿರಿಯ ನಾಯಕರ ಸಹಕಾರದ ಫಲವಾಗಿ ಈ ಯೋಜನೆ ಕಾರ್ಯರೂಪಕ್ಕೆ ಬಂದಿದೆ

ಸರಕಾರ ಕೈಗೊಂಡಿರುವ ಈ ನಿರ್ಧಾರದಿಂದಾಗಿ ರಾಜ್ಯದ ಸಾವಿರಾರು ಯುವಕ-ಯುವತಿಯರಿಗೆ ಸರ್ಕಾರಿ ಜಾಬ್ ದೊರೆಯಲಿದೆ. ಪ್ರಮುಖವಾಗಿ ನರ್ಸಿಂಗ್ ಅಧಿಕಾರಿಗಳು, ವೈದ್ಯರು, ಪ್ಯಾರಾಮೆಡಿಕಲ್ ಹಾಗೂ ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಯಾಗಲಿದ್ದು, ಕರಾವಳಿ ಭಾಗ ಸೇರಿದಂತೆ ರಾಜ್ಯದಾದ್ಯಂತ ಗ್ರಾಮೀಣ ಹಾಗೂ ನಗರ ಪ್ರದೇಶದ ಸರ್ಕಾರಿ ಆಸ್ಪತ್ರೆಗಳ ಸೇವಾ ಮಟ್ಟ ಉನ್ನತೀಕರಣಗೊಳ್ಳಲಿದೆ.

ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ಹಾಗೂ ಸಿಬ್ಬಂದಿ ಬಲವರ್ಧನೆಯೇ ತಮ್ಮ ಸರ್ಕಾರದ ಪ್ರಮುಖ ಗುರಿ ಎಂದು ಕಾಂಗ್ರೆಸ್ ತಿಳಿಸಿದ್ದು, ಶೀಘ್ರದಲ್ಲೇ ಈ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ.

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.

Leave a Reply

Your email address will not be published. Required fields are marked *