Ur Kannada News

ಕರ್ನಾಟಕವನ್ನು ಪೊಲೀಸ್ ರಾಜ್ಯವಾಗಲು ಬಿಡುವುದಿಲ್ಲ, ಸಿವಿಲ್ ವ್ಯಾಜ್ಯದಲ್ಲಿ ಪೊಲೀಸ್ ಹಸ್ತಕ್ಷೇಪ: ಹೈಕೋರ್ಟ್ ನಾಗಪ್ರಸನ್ನ ಪೀಠ ಚಾಟಿ,PSIಗೆ ಬಿತ್ತು 3 ಲಕ್ಷ ರೂಪಾಯಿ ದಂಡ.

ತಮ್ಮದಲ್ಲದ ಪ್ರಕರಣದಲ್ಲಿ ಮೂಗು ತೋರಿಸಿದ ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸರ ವಿರುದ್ಧ ಹೈಕೋರ್ಟ್‌ ಗರಂ ಆಗಿದೆ. ಅಲ್ಲದೇ ಭಾರೀ ದಂಡವನ್ನು ಪೊಲೀಸರ ಜೇಬಿನಿಂದಲೇ ತೆತ್ತಬೇಕು ಎಂದು ಆದೇಶ ನೀಡಿದೆ.

ಏನಿದು ಪ್ರಕರಣ?

ಸಿವಿಲ್ ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ವೈಟ್‌ಫೀಲ್ಡ್ ಪೊಲೀಸರು ಅನಗತ್ಯವಾಗಿ ಮಧ್ಯಪ್ರವೇಶಿಸಿದ್ದರು. ವಿವಾದಿತ ದಾನಪತ್ರವೊಂದಕ್ಕೆ ಸಾಕ್ಷಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಆ ವ್ಯಕ್ತಿಗೆ ಆಗಸ್ಟ್ 27ಕ್ಕೆ ನೋಟಿಸ್ ನೀಡಿದ್ದರು. ನೋಟಿಸ್‌ನಲ್ಲಿ ನೀಡಿದ ಸಮಯಕ್ಕಿಂತ ಮೊದಲೇ ಅಂದರೆ ಆಗಸ್ಟ್ 25ರಂದೇ ಆತನನ್ನು ಬಂಧಿಸುವ ಮೂಲಕ ಪೊಲೀಸರು ಕಾನೂನು ಉಲ್ಲಂಘಿಸಿದ್ದರು.

ಪೊಲೀಸ್ ರಾಜ್ಯ ಆಗಲು ಬಿಡುವುದಿಲ್ಲ – ಹೈಕೋರ್ಟ್ ಎಚ್ಚರಿಕೆ

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠವು ಪೊಲೀಸರ ಕಾರ್ಯವೈಖರಿ ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಇದು ಪ್ರಜಾಪ್ರಭುತ್ವವೇ ಹೊರತು ಪೊಲೀಸ್ ರಾಜ್ಯವಲ್ಲ. ರಾಜ್ಯವನ್ನು ಪೋಲೀಸ್ ರಾಜ್ಯವಾಗಲು ನಾವು ಬಿಡುವುದಿಲ್ಲ ಎಂದು ನ್ಯಾಯಪೀಠವು ಖಡಕ್ ಎಚ್ಚರಿಕೆ ನೀಡಿತು. ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿದ್ದ ತನಿಖಾಧಿಕಾರಿ ಪಿಎಸ್ಐ ಸುನಿಲ್ ಕುಮಾರ್ ಅವರನ್ನು ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿತು. ಎಸಿಪಿ ಹಾಗೂ ಡಿಸಿಪಿ ಸೂಚನೆ ನೀಡಿದರೆ ನೀವು ಏನು ಬೇಕಾದರೂ ಮಾಡುತ್ತೀರಾ? ಹಿರಿಯ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದ ನ್ಯಾಯಮೂರ್ತಿಗಳು, ಎಸಿಪಿ ಮತ್ತು ಡಿಸಿಪಿ ಅವರ ಹೊಣೆಗಾರಿಕೆಯ ಬಗ್ಗೆಯೂ ಕಿಡಿಕಾರಿದರು.

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.

Leave a Reply

Your email address will not be published. Required fields are marked *