Ur Kannada News

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ‘ಭಾರತ ಜೋಡೋ ಯುವ ಸಂಘ’ ಸಮನ್ವಯಕಾರರಾಗಿ ಅಬ್ದುಲ್ ರಝಾಕ್ ಕುಕ್ಕಾಜೆ ನೇಮಕ

ಬೆಂಗಳೂರು/ಮಂಗಳೂರು:ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಅವರ ಅಧಿಕೃತ ಆದೇಶದಂತೆ, ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿರುವ ಹಾಗೂ ಕಾಂಗ್ರೆಸ್ ಪಕ್ಷದ ಕ್ರಿಯಾಶೀಲ ನಾಯಕರಾದ ಅಬ್ದುಲ್ ರಝಾಕ್ ಕುಕ್ಕಾಜೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ‘ಭಾರತ ಜೋಡೋ ಯುವ ಸಂಘಗಳ’ ರಚನೆ ಹಾಗೂ ಸಮನ್ವಯ ಜವಾಬ್ದಾರಿಗೆ ನೇಮಕ ಮಾಡಲಾಗಿದೆ.

ಕರ್ನಾಟಕ ಸರ್ಕಾರದ ನಿರ್ದೇಶನದಂತೆ ಪ್ರತಿಯೊಂದು ಗ್ರಾಮ ಪಂಚಾಯತಿ ವ್ಯಾಪ್ತಿಯ ಯುವಜನರಲ್ಲಿ ಕ್ರೀಡಾ ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಲು ತಲಾ 10 ಸದಸ್ಯರನ್ನೊಳಗೊಂಡ ಯುವ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ. ಈ ಯೋಜನೆಯನ್ನು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎನ್‌ಎಸ್‌ಯುಐ , ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಸದಸ್ಯರನ್ನೊಳಗೊಂಡ ಸಮನ್ವಯ ತಂಡವನ್ನು ರಚಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಭಾಷ್‌ಚಂದ್ರ ಶೆಟ್ಟಿ ಅವರ ಸಂಯೋಜಕತ್ವದಲ್ಲಿ ಶ್ರೀ ಅಬ್ದುಲ್ ರಝಾಕ್ ಕುಕ್ಕಾಜೆ , ವೃಂದ ಪೂಜಾರಿ, ಸಂತೋಷ್ ಕುಮಾರ್ ಭಂಡಾರಿ ಮತ್ತು ಸರ್ಫರಾಜ್ ಅವರನ್ನು ನೇಮಿಸಲಾಗಿದೆ. ಈ ನಾಯಕರು ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಸ್ಥಳೀಯ ಯುವಜನರನ್ನು ಉತ್ತೇಜಿಸಿ, ಯುವ ಸಂಘಗಳನ್ನು ರಚಿಸುವ ಮತ್ತು ಪಕ್ಷ ಸಂಘಟನೆಯ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.

ಅಬ್ದುಲ್ ರಝಾಕ್ ಕುಕ್ಕಾಜೆ ಅವರ ಕ್ರಿಯಾಶೀಲತೆ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ತಂದಿದೆ. ಹಲವು ವರ್ಷಗಳಿಂದ ವಿವಿಧ ಸಾಮಾಜಿಕ, ರಂಗಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಸದಾ ಜನರ ಕಷ್ಟಸುಖಗಳಿಗೆ ಮಿಡಿಯುವ ಗುಣ ಅವರದ್ದು. ಪಕ್ಷದ ಕೆಳಹಂತದ ಕಾರ್ಯಕರ್ತರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಅವರು, ಯುವಜನರನ್ನು ಒಗ್ಗೂಡಿಸಿ ಮುನ್ನಡೆಸುವಲ್ಲಿ ಸದಾ ಮುಂಚೂಣಿಯಲ್ಲಿದ್ದಾರೆ.

ಇದೀಗ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ನೀಡಿರುವ ‘ಭಾರತ ಜೋಡೋ ಯುವ ಸಂಘ’ಗಳ ರಚನೆಯ ಈ ಹೊಸ ಜವಾಬ್ದಾರಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪಕ್ಷದ ಯುವ ಪಡೆಯನ್ನು ಮತ್ತಷ್ಟು ಬಲಪಡಿಸಲು ಅವರಿಗೆ ವೇದಿಕೆ ಸಿಕ್ಕಂತಾಗಿದೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಯುವಜನರನ್ನು ಸಂಘಟಿಸಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಕಾಳಜಿಯನ್ನು ಬೆಳೆಸುವ ಕಾರ್ಯಕ್ಕೆ ಅಬ್ದುಲ್ ರಝಾಕ್ ಕುಕ್ಕಾಜೆ ಅವರ ಅನುಭವ ಮತ್ತು ಚಟುವಟಿಕೆಗಳು ಕೊಡುಗೆ ನೀಡಲಿವೆ.

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.

Leave a Reply

Your email address will not be published. Required fields are marked *