Ur Kannada News

ಕಿಕ್ಕಿರಿದು ತುಂಬಿದ್ದ ಹೈಕೋರ್ಟ್ ಕಲಾಪ, 10 ಗಂಟೆಗಳ ನಿರಂತರ ಕಲಾಪ: ದೇಶದ ಹೈಕೋರ್ಟ್‌ಗಳ ಇತಿಹಾಸದಲ್ಲೇ ಹೊಸ ಹೆಜ್ಜೆ ಮೂಡಿಸಿದ ನ್ಯಾ. ನಾಗಪ್ರಸನ್ನ

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನ್ಯಾಯದಾನದಲ್ಲಿ ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದು, 6 ವರ್ಷಗಳಿಗೂ ಕಡಿಮೆ ಅವಧಿಯಲ್ಲಿ 22 ಸಾವಿರಕ್ಕೂ ಅಧಿಕ ಪ್ರಕರಣಗಳ ವಿಲೇವಾರಿ ಮಾಡುವ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ. 

ಅವರ ಸಾಧನೆ ಮತ್ತು ಕಾರ್ಯಶೈಲಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದ್ದು, ರೈತ ಸಂಘದ ಕ್ಷೀರಾಭಿಷೇಕ ಮಾಡುವ ಮೂಲಕ ತಮ್ಮ ಅಭಿಮಾನ ವ್ಯಕ್ತಪಡಿಸಿದ್ಧರು.

ಕಳೆದ ಬುಧವಾರ ನ್ಯಾ. ನಾಗಪ್ರಸನ್ನ ಮತ್ತೊಂದು ದಾಖಲೆ ಬರೆದು ಒಂದೇ ದಿನ ತುರ್ತು ವಿಚಾರಣೆಗೆ ಕೋರಿದ್ದ 250ಕ್ಕೂ ಹೆಚ್ಚು ಅರ್ಜಿಗಳನ್ನು ಬುಧವಾರ ವಿಚಾರಣೆ ನಡೆಸುವ ಮೂಲಕ ಹೊಸ ಇತಿಹಾಸ ಬರೆದರು

ಬೆಳಿಗ್ಗೆ ಎಂದಿನ ಕಲಾಪದಲ್ಲಿ ತುರ್ತು ವಿಚಾರಣೆಗೆ ಕೋರಲಾದ 250ಕ್ಕೂ ಹೆಚ್ಚು ಮೆಮೊ ಸ್ವೀಕರಿಸಿ ಅವುಗಳನ್ನು ಮಧ್ಯಾಹ್ನದ ಕಲಾಪ ಪಟ್ಟಿಗೆ ಅಣಿಗೊಳಿಸುವಂತೆ ಆದೇಶಿಸಿದರು.

ಬೆಳಗಿನ ಕಲಾಪದಲ್ಲಿ ಎಂದಿನಂತೆ ನಿಗದಿಯಾಗಿದ್ದ 318 ಅರ್ಜಿಗಳ ವಿಚಾರಣೆ ಪೂರೈಸಿದರು. ಭೋಜನ ಸಮಯದ ನಂತರ 2.30ಕ್ಕೆ ಆರಂಭಿಸಿದ ಕಲಾಪವನ್ನು ರಾತ್ರಿ 8.07ಕ್ಕೆ ಮುಕ್ತಾಯ ಗೊಳಿಸಿದರು.

ಒಂದು ದಿನದ ಕಲಾಪದ ಅವಧಿಯಲ್ಲಿ ಒಟ್ಟು 534 ರಿಟ್‌ ಮತ್ತು ಕ್ರಿಮಿನಲ್‌ ಅರ್ಜಿಗಳ ವಿಚಾರಣೆ ಪೂರೈಸಿ ಅವುಗಳಲ್ಲಿ ಒಟ್ಟು 85 ಅರ್ಜಿಗಳನ್ನು ವಿಲೇವಾರಿ ಮಾಡಿದರು.

ವಿಚಾರಣೆಯಲ್ಲಿ ಕಿಕ್ಕಿರಿದ್ದ ಹಿರಿ-ಕಿರಿಯ ವಕೀಲರು “ನ್ಯಾಯಮೂರ್ತಿಗಳು ದಿನವೊಂದರಲ್ಲಿ 10 ಗಂಟೆಗಳ ನಿರಂತರ ಕಲಾಪ ನಡೆಸಿದ ಹೆಗ್ಗಳಿಕೆ ಹೊಂದುವ ಮೂಲಕ ದೇಶದ ಹೈಕೋರ್ಟ್ ಗಳ ಇತಿಹಾಸದಲ್ಲಿ ಹೊಸ ಹೆಜ್ಜೆ ಮೂಡಿಸಿದ್ದೀರಿ” ಎಂದು ನ್ಯಾ.ನಾಗಪ್ರಸನ್ನ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

ನ್ಯಾ.ನಾಗಪ್ರಸನ್ನ ಅವರು ವಕೀಲ ವೃಂದದಿಂದ ನೇರವಾಗಿ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ 2019ರ ನವೆಂಬರ್‌ನಲ್ಲಿ ನೇಮಕಗೊಂಡ ನಂತರ ಪ್ರಕರಣಗಳ ವಿಲೇವಾರಿಯಲ್ಲಿ ವಿನೂತನ ದಾಖಲೆಗಳನ್ನು ನಿರ್ಮಿಸುತ್ತಿರುವುದು ಗಮನಾರ್ಹವಾಗಿದೆ.

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.

Leave a Reply

Your email address will not be published. Required fields are marked *