Ur Kannada News

ಒಂದೇ ಪಕ್ಷದ ಹಸ್ತ ಗುರುತಿನಿಂದಲೇ 9 ಬಾರಿ ವಿಧಾನಸಭಾ ಚುನಾವಣಾ ಅಖಾಡಕ್ಕಿಳಿದು ದಾಖಲೆ ಬರೆದ ಜನ ನಾಯಕನಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು

ಕರ್ನಾಟಕ ರಾಜ್ಯದ, ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಬಿ. ರಮಾನಾಥ ರೈ ಅವರದ್ದು ಪ್ರಮುಖ ಹೆಸರು. ಸೆಪ್ಟೆಂಬರ್ 13, 1952 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪೆರ್ನೆಯಲ್ಲಿ ಜನಿಸಿದ ಇವರು, ಮಂಗಳೂರು ವಿಶ್ವವಿದ್ಯಾನಿಲಯದಿಂದ ಬಿ.ಎ. ಪದವಿ ಪಡೆದಿದ್ದಾರೆ. ಮಂಗಳೂರು ಯೂನಿವರ್ಸಿಟಿ ಕಾಲೇಜಿನ ವಿದ್ಯಾರ್ಥಿ ಯೂನಿಯನ್ ಸ್ಥಾಪಕರಲ್ಲಿ ಒಬ್ಬರಾಗಿ, ಎನ್‌ಎಸ್‌ಯುಐ ಹಾಗೂ ಯುವ ಕಾಂಗ್ರೆಸ್ ಮೂಲಕ ತಮ್ಮ ರಾಜಕೀಯ ಪಯಣ ಆರಂಭಿಸಿದ ಇವರು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಕರಾವಳಿಯ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷದ ಹಸ್ತ ಗುರುತಿನಿಂದಲೇ ಒಟ್ಟು 9 ಬಾರಿ ಚುನಾವಣಾ ಅಖಾಡಕ್ಕಿಳಿದು ಸ್ಪರ್ಧಿಸಿದ ಅಪರೂಪದ ಜನನಾಯಕ ಇವರಾಗಿದ್ದಾರೆ.

ಬಂಟ್ವಾಳ ಕ್ಷೇತ್ರದಿಂದ 6 ಬಾರಿ ಶಾಸಕರಾಗಿ ಆಯ್ಕೆಯಾಗಿ, ಕ್ಷೇತ್ರದಾದ್ಯಂತ ಬಂಟ್ವಾಳದ ಅಭಿವೃದ್ಧಿ ರೂವಾರಿ ಎಂದೇ ಅವರು ಜನಪ್ರಿಯರಾಗಿದ್ದಾರೆ. ತಮ್ಮ ಸುದೀರ್ಘ ರಾಜಕೀಯ ಪಯಣದಲ್ಲಿ ವೀರಪ್ಪ ಮೊಯಿಲಿ ಅವರ ಸಂಪುಟದಲ್ಲಿ ಅಬಕಾರಿ ಮತ್ತು ಒಳಾಡಳಿತ ಸಚಿವರಾಗಿ, ಎಸ್. ಎಂ. ಕೃಷ್ಣ ಅವರ ಸಂಪುಟದಲ್ಲಿ ಸಾರಿಗೆ ಮತ್ತು ಬಂದರು ಸಚಿವರಾಗಿ ಹಾಗೂ ಸಿದ್ಧರಾಮಯ್ಯ ಅವರ ಮೊದಲ ಸಂಪುಟದಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾಗಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಜೊತೆಗೆ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ.

ತಮ್ಮ ರಾಜಕೀಯ ಜೀವನದುದ್ದಕ್ಕೂ ಭ್ರಷ್ಟಾಚಾರ ರಹಿತ, ಸಜ್ಜನ ಮತ್ತು ಮುತ್ಸದ್ದಿ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಇವರು, ಕೋಮುವಾದಿ ರಾಜಕಾರಣವನ್ನು ಪ್ರಬಲವಾಗಿ ವಿರೋಧಿಸುತ್ತಾ ಬಂದಿದ್ದಾರೆ. ಸದಾ ಸೌಹಾರ್ದತೆ, ಜಾತ್ಯತೀತತೆ, ಸಾಮಾಜಿಕ ನ್ಯಾಯ ಹಾಗೂ ಕಾಂಗ್ರೆಸ್ ಪಕ್ಷದ ತತ್ತ್ವ ಸಿದ್ಧಾಂತಗಳಲ್ಲಿ ಸ್ಪಷ್ಟತೆ ಮತ್ತು ಬದ್ಧತೆಯನ್ನು ಕಾಯ್ದುಕೊಂಡು ಬಂದ ಕರಾವಳಿಯ ಕಣ್ಮಣಿ ರಮಾನಾಥ ರೈ ಯವರು, ಸಿದ್ಧಾಂತಗಳ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳದ ಧುರೀಣರೆನಿಸಿಕೊಂಡಿದ್ದಾರೆ.

ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ನಮ್ಮ ಹೆಮ್ಮೆಯ ನಾಯಕ ಬಿ. ರಮಾನಾಥ ರೈ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನು ಇವರಿಗೆ ಆಯುಷ್ಯ, ಆರೋಗ್ಯ, ನೆಮ್ಮದಿ ಮತ್ತು ಇನ್ನಷ್ಟು ಕಾಲ ಸಮಾಜ ಸೇವೆ ಮಾಡುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ.

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.

Leave a Reply

Your email address will not be published. Required fields are marked *