Ur Kannada News

ಉಳ್ಳಾಲ ದಸರಾ ಕ್ರೀಡಾಕೂಟ: ಫುಟ್ಬಾಲ್‌ನಲ್ಲಿ ನಮ್ಮ ಬೋಳಿಯಾರ್ ತಂಡಕ್ಕೆ ದ್ವಿತೀಯ ಸ್ಥಾನ

ಭಾನುವಾರ (ಸೆ. 13) ನಡೆದ ಉಳ್ಳಾಲ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2026/27ರ ಅಂಗವಾಗಿ ಆಯೋಜಿಸಲಾಗಿದ್ದ ಫುಟ್ಬಾಲ್ ಪಂದ್ಯಾಟದಲ್ಲಿ ಬೋಳಿಯಾರ್ ಗ್ರಾಮದ ಯುವಕರ ತಂಡವು ಅತ್ಯುತ್ತಮ ಸಾಂಘಿಕ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಅಂತಿಮ ಹಂತದ ಜಿದ್ದಾಜಿದ್ದಿನ ಫೈನಲ್ ಪಂದ್ಯದಲ್ಲಿ ನಾಣ್ಯ ಚಿಮ್ಮುಗೆ ಮೂಲಕ ಫಲಿತಾಂಶ ನಿರ್ಧಾರಗೊಂಡು ಬೋಳಿಯಾರ್ ತಂಡವು ರನ್ನರ್ಸ್ ಅಪ್ ಪಟ್ಟಕ್ಕೆ ಪಾತ್ರವಾಯಿತು. ಪಂದ್ಯಾವಳಿಯ ಕೊನೆಯಲ್ಲಿ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಬೋಳಿಯಾರ್ ತಂಡದ ಆಟಗಾರರು ದ್ವಿತೀಯ ಸ್ಥಾನದ ಆಕರ್ಷಕ ಪ್ರಶಸ್ತಿ , ಪದಕ ಹಾಗೂ ಪ್ರಮಾಣಪತ್ರಗಳನ್ನು ಸ್ವೀಕರಿಸಿದರು.

ಬೋಳಿಯಾರ್ ಗ್ರಾಮದ ಯುವಕರು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿರುವುದರ ಜೊತೆಗೆ, ಕ್ರೀಡಾ ಕ್ಷೇತ್ರದಲ್ಲೂ ತಮ್ಮದೇ ಆದ ಛಾಪನ್ನು ಮೂಡಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ಕಠಿಣ ಪರಿಶ್ರಮ ಮತ್ತು ಸಾಂಘಿಕ ಪ್ರದರ್ಶನ ನೀಡಿ ಊರಿಗೆ ಕೀರ್ತಿ ತಂದ ಬೋಳಿಯಾರ್ ತಂಡದ ಎಲ್ಲಾ ಆಟಗಾರರಿಗೆ ಗ್ರಾಮಸ್ಥರು ಹಾಗೂ ಕ್ರೀಡಾಭಿಮಾನಿಗಳು ಶುಭ ಹಾರೈಸಿ ಅಭಿನಂದನೆ ಸಲ್ಲಿಸಿದ್ದಾರೆ.

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.

Leave a Reply

Your email address will not be published. Required fields are marked *