Ur Kannada News

ಅಲ್ಪಸಂಖ್ಯಾತ ಶಿಕ್ಷಣ ಸುಧಾರಣೆಗೆ ಮಾಸ್ಟರ್ ಪ್ಲಾನ್: ಸರ್ಕಾರದ ‘ವಿಷನ್ ಗ್ರೂಪ್’ ಸಮಿತಿಗೆ ಯು.ಟಿ. ಫರ್ಝಾನಾ ಆಯ್ಕೆ

ಬೆಂಗಳೂರು: ಕರ್ನಾಟಕದಲ್ಲಿ ಅಲ್ಪಸಂಖ್ಯಾತರ ಶಿಕ್ಷಣ ವ್ಯವಸ್ಥೆಯನ್ನು ಆಧುನೀಕರಿಸುವ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಹೊಸ ದಿಕ್ಸೂಚಿ ನೀಡುವ ಮಹತ್ವದ ಉದ್ದೇಶದೊಂದಿಗೆ ಸರ್ಕಾರವು ಕರ್ನಾಟಕ ಅಲ್ಪಸಂಖ್ಯಾತರ ಶಿಕ್ಷಣ ವಿಷನ್ ಗ್ರೂಪ್ ಸಮಿತಿಯನ್ನು ರಚಿಸಿದೆ.

ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಈ ಉನ್ನತ ಮಟ್ಟದ ಸಮಿತಿಯ ಸದಸ್ಯರಾಗಿ ಆಯಿಷಾ ಫರ್ಝಾನ ಯು.ಟಿ ಅವರನ್ನು ನೇಮಕ ಮಾಡಲಾಗಿದೆ.  

ರಾಜ್ಯಸಭಾ ಸದಸ್ಯ ಹಾಗೂ ಶಿಕ್ಷಣ ತಜ್ಞ ಮನ್ಸೂರ್ ಅಲಿ ಖಾನ್ ಅವರ ಅಧ್ಯಕ್ಷತೆಯಲ್ಲಿ ರಚನೆಗೊಂಡಿರುವ ಈ 16 ಸದಸ್ಯರ ಸಮಿತಿಯಲ್ಲಿ ವಿವಿಧ ಕ್ಷೇತ್ರಗಳ ಪ್ರಮುಖ ತಜ್ಞರು ಹಾಗೂ ಹಿರಿಯ ಅಧಿಕಾರಿಗಳನ್ನು ಸೇರ್ಪಡೆಗೊಳಿಸಲಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿನ ತಮ್ಮ ಅನುಭವ ಮತ್ತು ಶೈಕ್ಷಣಿಕ ಕೊಡುಗೆಯ ಆಧಾರದ ಮೇಲೆ ಯು.ಟಿ. ಫರ್ಝಾನಾ ಅವರಿಗೆ ಈ ಜವಾಬ್ದಾರಿಯನ್ನು ನೀಡಲಾಗಿದೆ. ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು, ಮೂಲಸೌಕರ್ಯಗಳನ್ನು ಬಲಪಡಿಸುವುದು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಸುಧಾರಣೆಗಳನ್ನು ತರಲು ಸರ್ಕಾರಕ್ಕೆ ಅಗತ್ಯವಾದ ಸಮಗ್ರ ಸಲಹೆಗಳನ್ನು ನೀಡುವುದು ಈ ‘ವಿಷನ್ ಗ್ರೂಪ್’ ಸಮಿತಿಯ ಮುಖ್ಯ ಕಾರ್ಯವಾಗಿದೆ.

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.

Leave a Reply

Your email address will not be published. Required fields are marked *