ಪದ್ಮರಾಜ್ ಆರ್. ಪೂಜಾರಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ: ಬಂಟ್ವಾಳ ಲೀಗಲ್ ಸೆಲ್ ಅಭಿನಂದನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಮಿಟಿಯ ನೂತನ ಅಧ್ಯಕ್ಷರಾಗಿ ನಿಯೋಜಿತರಾಗಿದ್ದ ಶ್ರೀ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಅಧಿಕೃತ ಪದಗ್ರಹಣ ಕಾರ್ಯಕ್ರಮದಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ.

ಶ್ರೀ ಪದ್ಮರಾಜ್ ಆರ್. ಪೂಜಾರಿ ಅವರು ವೃತ್ತಿಯಲ್ಲಿ ವಕೀಲರಾಗಿದ್ದು, ರಾಜಕೀಯ ಕ್ಷೇತ್ರದ ಜೊತೆಗೆ ಸಾಮಾಜಿಕ, ಧಾರ್ಮಿಕ ಹಾಗೂ ಕಾನೂನು ಕ್ಷೇತ್ರಗಳಲ್ಲಿ ತಮ್ಮ ಜನಪರ ಕಾಳಜಿ ಮತ್ತು ನಿರಂತರ ಸೇವೆಯಿಂದ ಗಮನ ಸೆಳೆದಿದ್ದಾರೆ. ಸರ್ವ ಧರ್ಮೀಯರನ್ನು, ಎಲ್ಲಾ ಜನಸಮುದಾಯಗಳನ್ನು ಹಾಗೂ ಪಕ್ಷದ ಹಿರಿಯ-ಕಿರಿಯ ಕಾರ್ಯಕರ್ತರನ್ನು ಒಟ್ಟಿಗೆ ಕೊಂಡೊಯ್ಯುವ ಅವರ ಸೌಹಾರ್ದಯುತ ವ್ಯಕ್ತಿತ್ವವು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮತ್ತು ಸಂಚಲನ ಮೂಡಿಸಿದೆ.
ಪದ್ಮರಾಜ್ ಆರ್. ಪೂಜಾರಿ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವು ಸಂಘಟನಾತ್ಮಕವಾಗಿ ಇನ್ನಷ್ಟು ಬಲಗೊಂಡು ಯಶಸ್ಸಿನತ್ತ ಸಾಗಲಿ ಎಂದು ಬಂಟ್ವಾಳ ಲೀಗಲ್ ಸೆಲ್ ಹಾರೈಸಿ ಅಭಿನಂದನೆಗಳನ್ನು ಸಲ್ಲಿಸಿದೆ.



