ಮೊಬೈಲ್‌ನಲ್ಲೇ ರೇಷನ್ ಕಾರ್ಡ್ e-KYC: ಸಚಿವ ರಿಜ್ವಾನ್ ಅರ್ಷದ್‌ರಿಂದ ‘ಅನ್ನ ಸೇವಾ’ ಆಪ್ ಬಿಡುಗಡೆ
ಬೆಂಗಳೂರು : ಪಡಿತರ ಚೀಟಿದಾರರು ಇ-ಕೆವೈಸಿ ಅಪ್‌ಡೇಟ್ ಮಾಡಲು ನ್ಯಾಯಬೆಲೆ ಅಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಅಭಿವೃದ್ಧಿಪಡಿಸಲಾಗಿರುವ ‘ಅನ್ನ ಸೇವಾ’ ಮೊಬೈಲ್ ಆಪ್‌ಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಪ್ರಾಯೋಗಿಕವಾಗಿ ಚಾಲನೆ ನೀಡಿದ್ದಾರೆ.

ರಾಜೀವ್ ಗಾಂಧಿ ಕಾಲೋನಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಡಿತರ ಫಲಾನುಭವಿಗಳು ತಾವೇ ನೇರವಾಗಿ ಮೊಬೈಲ್ ಆಪ್ ಡೌನ್‌ಲೋಡ್ ಮಾಡಿಕೊಂಡು ಸುಲಭವಾಗಿ ಇ-ಕೆವೈಸಿ ಪೂರ್ಣಗೊಳಿಸಬಹುದು ಎಂದು ತಿಳಿಸಿದ್ದು, ಈ ಪ್ರಕ್ರಿಯೆಗೆ October 20ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ. ಮೊದಲ ಹಂತದಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮೀಣ, ಉಡುಪಿ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಬೀದರ್ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಈ ಆಪ್ ಸೇವೆಯನ್ನು ಪ್ರಯೋಗಾತ್ಮಕವಾಗಿ ಜಾರಿಗೊಳಿಸಲಾಗಿದ್ದು, ಉಳಿದ ಜಿಲ್ಲೆಗಳಿಗೆ ಮುಂದಿನ 15 ರಿಂದ 20 ದಿನಗಳಲ್ಲಿ ವಿಸ್ತರಿಸಲಾಗುವುದು.

