Latest:
Ur Kannada News

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಬೃಹತ್ ಅಭಿಯಾನ: ಬಂಟ್ವಾಳದಲ್ಲಿ ಸಮಾಲೋಚನಾ ಸಭೆಗೆ ವಕೀಲ ಸಮುದಾಯಕ್ಕೆ ಆತ್ಮೀಯ ಆಹ್ವಾನ

ಬಂಟ್ವಾಳ: ಮಂಗಳೂರಿನಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂಬ ಮಹತ್ವದ ಆಶಯದೊಂದಿಗೆ ‘ಯುನೈಟೆಡ್ ಲೀಗಲ್ ರಿಸರ್ಚ್ ಅಂಡ್ ಜಸ್ಟೀಸ್ ಟ್ರಸ್ಟ್, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು’ ವತಿಯಿಂದ ಆಯೋಜಿಸಲಾಗಿರುವ ಸಮಾಲೋಚನಾ ಸಭೆಯ ಪ್ರಚಾರದ ಅಂಗವಾಗಿ ಬಂಟ್ವಾಳ ನ್ಯಾಯಾಲಯ ಸಂಕೀರ್ಣದಲ್ಲಿ ವಕೀಲ ಮಿತ್ರರನ್ನು ಆತ್ಮೀಯವಾಗಿ ಆಹ್ವಾನಿಸಲಾಯಿತು.

ಕರಾವಳಿ ಹಾಗೂ ಮಲೆನಾಡು ಭಾಗದ ಜನಸಾಮಾನ್ಯರಿಗೆ ನ್ಯಾಯವು ಅತ್ಯಂತ ಸುಲಭವಾಗಿ ಹಾಗೂ ತ್ವರಿತವಾಗಿ ದೊರಕಿಸುವ ನಿಟ್ಟಿನಲ್ಲಿ ಈ ಜನಪರ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ. ಈ ಭಾಗದ ಸಾರ್ವಜನಿಕರು ಕಾನೂನು ಹೋರಾಟಕ್ಕಾಗಿ ರಾಜಧಾನಿ ಬೆಂಗಳೂರಿಗೆ ಅಲೆಯುವುದನ್ನು ತಪ್ಪಿಸಲು ಮಂಗಳೂರಿನಲ್ಲಿ ಹೈಕೋರ್ಟ್ ಪೀಠದ ಅಗತ್ಯತೆಯಿದ್ದು, ಈ ಜನಪರ ಪ್ರಯತ್ನಕ್ಕೆ ವಕೀಲ ಸಮುದಾಯವು ಸಂಪೂರ್ಣ ಬೆಂಬಲ ಮತ್ತು ಸಹಕಾರ ನೀಡಬೇಕೆಂದು ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಸುರೇಶ್ ಪೂಜಾರಿ, ಕಬೀರ್ ಕೆಮ್ಮಾರ, ವಕೀಲರಾದ ಸತೀಶ್, bak ಹಾಗೂ ಹಲವು ಹಿರಿಯ ಮತ್ತು ಕಿರಿಯ ವಕೀಲರು ಉಪಸ್ಥಿತರಿದ್ದರು.

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.

Leave a Reply

Your email address will not be published. Required fields are marked *