Ur Kannada News

ಪ್ರಿಯಾಂಕ್ ಖರ್ಗೆ ಗೃಹ ಸಚಿವರಲ್ಲ, ಫೇಸ್‌ಬುಕ್ ಮಂತ್ರಿ”: ಶಾಸಕ ಸುನಿಲ್ ಕುಮಾರ್ ವ್ಯಂಗ್ಯ.

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸರ್ಕಾರದ ವೈಫಲ್ಯ ಹಾಗೂ ನೀತಿಗಳ ವಿರುದ್ಧ ಯಾರೂ ಮಾತನಾಡಬಾರದು ಎನ್ನುವಂತಹ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ಅವರ ನಡೆಯನ್ನು ಕಠಿಣ ಶಬ್ದಗಳಲ್ಲಿ ಟೀಕಿಸಿದರು.

ಪ್ರಿಯಾಂಕ್ ಖರ್ಗೆ ಅವರು ಈಗ ಕೇವಲ ಸಚಿವರಾಗಿ ಉಳಿದಿಲ್ಲ; ಬದಲಿಗೆ ವಾಟ್ಸ್‌ಆ್ಯಪ್ ಹಾಗೂ ಫೇಸ್‌ಬುಕ್ ನಿಯಂತ್ರಿಸುವ ಮಂತ್ರಿಯಾಗಿ ಮಾರ್ಪಾಡಾಗಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದರೂ ಅದರ ಕಡೆ ಗಮನ ಹರಿಸುತ್ತಿಲ್ಲ” ಎಂದು ಸುನಿಲ್ ಕುಮಾರ್ ವ್ಯಂಗ್ಯವಾಡಿದರು.

ಸರ್ಕಾರದ ವಿರುದ್ಧ ಧ್ವನಿ ಎತ್ತುವವರನ್ನು ಹಸಿಬಿಸಿ ಬೆದರಿಕೆ ಹಾಗೂ ಪ್ರಕರಣಗಳ ಮೂಲಕ ಹತೋಟಿಯಲ್ಲಿಡಲು ಯತ್ನಿಸಲಾಗುತ್ತಿದೆ” ಎಂದು ಶಾಸಕ ಸುನಿಲ್ ಕುಮಾರ್ ಆರೋಪಿಸಿದರು.

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.