Ur Kannada News

ಮಂಗಳೂರು ವಕೀಲರ ಸಂಘದಿಂದ ನಾಳೆ ‘ಆಟಿದ ನೆಂಪು’ ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮ

ಮಂಗಳೂರು: ಮಂಗಳೂರು ವಕೀಲರ ಸಂಘ (ರಿ.) ವತಿಯಿಂದ ಕರಾವಳಿಯ ನೆಲದ ಸಂಸ್ಕೃತಿ, ಸಂಸ್ಕಾರ, ಕೃಷಿ ಕಾಯಕ, ಆಚಾರ-ವಿಚಾರ ಹಾಗೂ ಸಾಂಪ್ರದಾಯಿಕ ಆಹಾರ ಪದ್ಧತಿಯ ವೈಶಿಷ್ಟ್ಯಗಳನ್ನು ಪುನರಪಿ ನೆನಪಿಸುವ ‘ಆಟಿದ ನೆಂಪು’ ಕಾರ್ಯಕ್ರಮವನ್ನು ಆಗಸ್ಟ್ 1, ಶನಿವಾರ ಆಯೋಜಿಸಲಾಗಿದೆ.

ಮಂಗಳೂರು ನ್ಯಾಯಾಲಯ ಸಂಕೀರ್ಣದಲ್ಲಿ ಮಧ್ಯಾಹ್ನ 12.15ಕ್ಕೆ ನಡೆಯಲಿರುವ ಈ ವಿಶೇಷ ಕಾರ್ಯಕ್ರಮವನ್ನು ಬೆಂಗಳೂರು ಕರ್ನಾಟಕ ಉಚ್ಛ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿ ಟಿ. ಎನ್. ಇನವಳ್ಳಿ ಅವರು ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಶ್ರೀ ಐ. ತಾರಾನಾಥ ಪೂಜಾರಿ ಹಾಗೂ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಶ್ರೀ ಬಸವರಾಜ್ ಅವರು ಉಪಸ್ಥಿತರಿರಲಿದ್ದಾರೆ.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿರುವ ಮಂಗಳೂರು ವಕೀಲರ ಸಂಘದ ವಕೀಲರಾದ ಶ್ರೀ ಹರೀಶ್ ಆಳ್ವ ಅವರು ‘ಆಟಿ ತಿಂಗಳ ವಿಶೇಷತೆ’ಯ ಕುರಿತು ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಜಗದೀಶ ಕೆ. ಶೇಣವ ವಹಿಸಲಿದ್ದಾರೆ.

ವಿಶೇಷ ಆಕರ್ಷಣೆ:

ಕಾರ್ಯಕ್ರಮದಲ್ಲಿ ಕರಾವಳಿಯ ಸಾಂಪ್ರದಾಯಿಕ ವೈವಿಧ್ಯಮಯ ಆಟಿ ತಿಂಗಳ ತಿನಸುಗಳ ಉಪಹಾರ ಹಾಗೂ ವಕೀಲರ ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದು, ಕಾರ್ಯಕ್ರಮಕ್ಕೆ ಎಲ್ಲರೂ ಆದರದ ಸ್ವಾಗತ ಬಯಸುವುದಾಗಿ ಮಂಗಳೂರು ವಕೀಲರ ಸಂಘದ ಅಧ್ಯಕ್ಷರು ಮತ್ತು ಸರ್ವಸದಸ್ಯರು ತಿಳಿಸಿದ್ದಾರೆ.

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.